- Advertisement -
- Advertisement -
ಬೆಂಗಳೂರಿನ ಪಾದರಾಯನಪುರದಲ್ಲಿ ಕಳೆದ ರಾತ್ರಿ ನಡೆದ ಘಟನೆ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ. ರಕ್ಷಣೆಗೆ ಹೋದವರ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದಕ್ಕೆ ರಾಜ್ಯದಾದ್ಯಂತ ಖಂಡನೆ ವ್ಯಕ್ತವಾಗುತ್ತಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.
ಇದರ ಮಧ್ಯೆ ಪಾದರಾಯನಪುರ ಗಲಭೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಯು.ಟಿ. ಖಾದರ್, ದುಷ್ಕರ್ಮಿಗಳು ದಾಳಿ ನಡೆಸಿರುವುದು ತೀವ್ರ ಖಂಡನೀಯ ಎಂದು ಹೇಳಿದ್ದಾರೆ. ಅವರುಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕೆಂದು ಖಾದರ್ ಹೇಳಿದ್ದಾರೆ.
ಈ ಹಿಂದೆ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದ ಸಂದರ್ಭದಲ್ಲಿ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಎಂದು ಹೇಳಿರುವ ಯು.ಟಿ. ಖಾದರ್, ಈಗಲಾದರೂ ಸರ್ಕಾರ ಎಚ್ಚೆತ್ತು ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
- Advertisement -
