Saturday, May 18, 2024
Homeಕರಾವಳಿಪರಿಶಿಷ್ಟರ ಮೀಸಲು ಹಣ ಗ್ಯಾರಂಟಿಗೆ ಬಳಕೆ; ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಪರಿಶಿಷ್ಟರ ಮೀಸಲು ಹಣ ಗ್ಯಾರಂಟಿಗೆ ಬಳಕೆ; ಬಿಜೆಪಿಯಿಂದ ಬೃಹತ್ ಪ್ರತಿಭಟನೆ

spot_img
- Advertisement -
- Advertisement -

ಮಂಗಳೂರು: ಬಿಜೆಪಿ ಮುಖಂಡರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಕಾರ್ಯಕ್ರಮಗಳಿಗೆ ಬಳಸಿ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಸೋಮವಾರದಂದು ಪ್ರತಿಭಟನೆ ನಡೆಸಿದರು.

ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದ ಪಕ್ಷದ ಮುಖಂಡ ವಿನಯ ನೇತ್ರ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಸರ್ಕಾರ ಅನುದಾನವನ್ನೂ ಕಡಿತಗೊಳಿಸಿದೆ. ಸಮಾಜ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಸುಮಾರು 7 11 ಸಾವಿರ ಕೋಟಿಗಳಷ್ಟು ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಇದರಿಂದ ಪರಿಶಿಷ್ಟರಿಗೆ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ತನ್ನ ಘೋರಿಯನ್ನು ತಾನೇ ತೋಡಿಕೊಳ್ಳುತ್ತಿದೆ’ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ‘ತಮ್ಮನ್ನು ದಲಿತ ಪರ ಎಂದು ಕರೆದುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನ ಶೇ 2.5ರಷ್ಟನ್ನೂ ದಲಿತರ ಕಾರ್ಯಕ್ರಮಗಳಿಗೆ ಮೀಸಲಿಡದೇ ಅನ್ಯಾಯ ಮಾಡಿದ್ದಾರೆ. * ಬೆಳಗಾವಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಅಪಮಾನಿಸಿದವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ ರಾಜ್ಯದಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತಿಲ್ಲ. ಗ್ಯಾರಂಟಿ ಕಾರ್ಯಕ್ರಮಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವೇ ಇಲ್ಲದಂತಾಗಿದೆ’ ಎಂದರು.

ವಿಕಾಸ್ ಪುತ್ತೂರು, ನಿತಿನ್ ಕುಮಾರ್‌, ನಂದನ್ ಮಲ್ಯ, ಜಗನ್ನಾಥ ಬೆಳುವಾಯಿ, ಪೂರ್ಣಿಮಾ, ಉಪಮೇಯ‌ ಸುನೀತಾ ಮತ್ತಿತರರು ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!