- Advertisement -
- Advertisement -
ಉತ್ತರ ಪ್ರದೇಶ : ಉತ್ತರ ಪ್ರದೇಶದ ಇಟಾ ಜಿಲ್ಲೆಯ ಕೊಟ್ಟಾಲಿಯಾ ಶೃಂಗಾರ್ ನಗರದಲ್ಲಿ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಒಂದೇ ಕುಟುಂಬದ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಐವರ ಮೃತದೇಹಗಳು ಇಂದು ಬೆಳಗ್ಗೆ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಲಾಗಿದೆ.
ಇನ್ನು ಸಾವಿಗೆ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಆರಂಭಿಸಲಾಗಿದೆ ಎಂದು ಎಎಸ್ ಪಿ ಸುನೀಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
- Advertisement -