Thursday, June 4, 2026
Homeಕರಾವಳಿಸೆಪ್ಟೆಂಬರ್ 1 ರಂದು ಬೆಂಗಳೂರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ : ನೆಲಮಂಗಲದ ಶ್ರೀ...

ಸೆಪ್ಟೆಂಬರ್ 1 ರಂದು ಬೆಂಗಳೂರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ : ನೆಲಮಂಗಲದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಯಾಂಪಸ್ ನಲ್ಲಿ ಕ್ಷೇಮ ವನ ಉದ್ಘಾಟನೆ

- Advertisement -
- Advertisement -

ಬೆಂಗಳೂರು: ಸೆಪ್ಟೆಂಬರ್ 1 ರಂದು ಬೆಂಗಳೂರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ.

ನೆಲಮಂಗಲದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕ್ಯಾಂಪಸ್ ಗೆ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದು, ಕ್ಯಾಂಪಸ್ ನಲ್ಲಿ ಕ್ಷೇಮವನ ಉದ್ಘಾಟಿಸಲಿದ್ದಾರೆ.

ಅಲ್ಲದೇ ಎಸ್ ಡಿಎಂ ಕ್ಯಾಂಪಸ್ ವೀಕ್ಷಣೆ ಮತ್ತು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನೂ ಯೋಗಿ ಆದಿತ್ಯನಾಥ್ ಭೇಟಿ ಮಾಡಲಿದ್ದಾರೆ.

ಗುರುವಾರ ಬೆಳಗ್ಗೆ 11.30ಕ್ಕೆ ಲಕ್ನೋದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿ‌ ಲನ ಹೆಚ್ ಎಎಲ್ ಏರ್ ಪೋರ್ಟ್ಆಗಮಿಸಿ ಮಧ್ಯಾಹ್ನ 2.30 ಕ್ಕೆ ಉತ್ತರ ಪ್ರದೇಶ ಸಿಎಂ ವಾಪಸಾಗಲಿದ್ದಾರೆ.

ಕ್ಷೇಮ ವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ. ಸುಧಾಕರ್, ಆನಂದ್ ಸಿಂಗ್, ಸಂಸದ ಬಿ.ಎನ್. ಬಚ್ಚೇಗೌಡ ಮತ್ತು ಶಾಸಕ ಕೆ.‌ ಶ್ರೀನಿವಾಸಮೂರ್ತಿ ಪಾಲ್ಗೊಳ್ಳಲಿದ್ದಾರೆ.

- Advertisement -

Latest News

error: Content is protected !!