Wednesday, June 24, 2026
Homeಕರಾವಳಿಮಂಗಳೂರುಮಾಜಿ ಸಂಸದ  ನಳೀನ್ ಕುಮಾರ್ ಕಟೀಲ್ ನಿವಾಸಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ

ಮಾಜಿ ಸಂಸದ  ನಳೀನ್ ಕುಮಾರ್ ಕಟೀಲ್ ನಿವಾಸಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ

- Advertisement -
- Advertisement -

ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ ಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು ಆಗಬೇಕಿರುವ ಹೊಸ ಯೋಜನೆಗಳಿಗೆ ತುಂಬು ಹೃದಯದ ಸಹಕಾರ ದೊರಕುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಅದ್ಯಕ್ಷರಾದ  ಸತೀಶ್ ಕುಂಪಲ, ಮಾಜಿ ಶಾಸಕ ಸಂಜೀವ ಮಠಂದೂರು,ಕಿಶೋರ್ ಕುಮಾರ್ , ದಿವಾಕರ ಪಾಂಡೇಶ್ವರ, ರಮೇಶ್ ಕಂಡೆಟ್ಟು, ಗಣೇಶ್ ಕುಲಾಲ್, ರಾಹುಲ್ ಶೆಟ್ಟಿ, ಗೌತಮ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!