Sunday, May 5, 2024
Homeಕರಾವಳಿಬೆಳ್ತಂಗಡಿ ವಿ.ಎ.ರೂಪೇಶ್ ಆರೋಗ್ಯದಲ್ಲಿ ತೀವ್ರ ಏರುಪೇರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಳ್ತಂಗಡಿ ವಿ.ಎ.ರೂಪೇಶ್ ಆರೋಗ್ಯದಲ್ಲಿ ತೀವ್ರ ಏರುಪೇರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

spot_img
- Advertisement -
- Advertisement -

ಬೆಳ್ತಂಗಡಿ :  ಮೆದುಳು ರಕ್ತಸ್ರಾವದಿಂದ ಬೆಳ್ತಂಗಡಿ ನಿವಾಸಿ ಗ್ರಾಮ ಲೆಕ್ಕಿಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ,ಶಿಶಿಲ, ಶಿಬಾಜೆ, ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಲೆಕ್ಕಿಗ(ವಿಎ) ಆಗಿ ಕರ್ತವ್ಯ ನಿರ್ವಹಿಸಿದ್ದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರೂಪೇಶ್(38) ಅವರು ಶುಕ್ರವಾರ ರಾತ್ರಿ ಸುಮಾರು 2 ಗಂಟೆ ವೇಳೆ ಎದ್ದು ಬಿಪಿ ಮಾತ್ರ ತಂದುಕೊಡಲು ಹೆಂಡತಿ ಬಳಿ ಹೇಳಿದ್ದಾರೆ. ಪತ್ನಿ ಮಾತ್ರೆ ತಂದಾಗ ರೂಪೇಶ್ ಅವರಿಗೆ ಉಸಿರಾಟ ಮಾತ್ರ ಇದ್ದು ದೇಹದಲ್ಲಿ ಯಾವುದೇ ಚಲನೆ‌ ಇರಲಿಲ್ಲ. ತಕ್ಷಣ ಸಂಬಂಧಿಕರು ಸೇರಿ ಗುರುವಾಯನಕೆರೆ ಅಭಯ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಎಜೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು  ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಿದ್ದಾರೆ.

ನಂತರ ಪಡೀಲ್ ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿ ವೈದ್ಯರು ಪರೀಕ್ಷಿಸಿದಾಗ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದ್ದು ಉಸಿರಾಟ ಮಾತ್ರ ಇದೆ ಬದುಕುಳಿಯುವ ಲಕ್ಷಣ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದುಮನೆಮಂದಿ ಹಾಗೂ ಇಲಾಖೆಯಲ್ಲಿರುವ ಗೆಳೆಯರು ಸೇರಿ ಉಡುಪಿ ಆದರ್ಶ  ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ.

ರೂಪೇಶ್ ಹಲವು ವರ್ಷ ಬೆಳ್ತಂಗಡಿ ತಾಲೂಕಿನ ಹಲವೆಡೆ ಗ್ರಾಮ ಲೆಕ್ಕಿಗನಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ರೂಪೇಶ್ ಅವರಿಗೆ ಮದುವೆಯಾಗಿದ್ದು ಎರಡು ಹೆಣ್ಣು ಮಕ್ಕಳು ಇದ್ದಾರೆ. ಇನ್ನು ಲಾಯಿಲ ಗ್ರಾಮ ಪಂಚಾಯತ್ ಒಂದನೇ ವಾರ್ಡ್ ಸದಸ್ಯರಾದ ಏಣೆಂಜೆ ಪ್ರಸಾದ್ ಶೆಟ್ಟಿ ರೂಪೇಶ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

- Advertisement -
spot_img

Latest News

error: Content is protected !!