ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ ವತಿಯಿಂದ ವಿಧಾನಸೌಧ ಮುತ್ತಿಗೆ ಪ್ರತಿಭಟನೆ ನಡೆಯಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗ್ಗೆ 9:30ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ವಿಧಾನಸೌಧಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರ ನೀಡಿದರು.
ಇದೇ ವೇಳೆ ಸರ್ಕಾರದ ವಿರುದ್ಧದ ಈ ಹೋರಾಟವನ್ನು ತೀವ್ರಗೊಳಿಸುವಂತೆ ತಿಳಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಪ್ರತಿಭಟನೆಗೆ ತಮ್ಮ ಜೆಡಿಎಸ್ ಪಕ್ಷದ ಸಂಪೂರ್ಣ ಸಹಕಾರ ಹಾಗೂ ಬೆಂಬಲ ಇರಲಿದೆ ಎಂದು ಅಭಯ ನೀಡಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ: ನಾಳೆ ವಿಧಾನಸೌಧ ಮುತ್ತಿಗೆಗೆ ಬಿಜೆಪಿ-ಜೆಡಿಎಸ್ ನಿರ್ಧಾರ
- Advertisement -
- Advertisement -
- Advertisement -


