Friday, June 5, 2026
Homeತಾಜಾ ಸುದ್ದಿಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ಇನ್ನು ನೆನೆಪು ಮಾತ್ರ

ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ಇನ್ನು ನೆನೆಪು ಮಾತ್ರ

- Advertisement -
- Advertisement -

ಉಡುಪಿ:ಇಲ್ಲಿನ ಕುಂದಾಪುರ ತಾಲ್ಲೂಕಿನ ವಂಡ್ಸೆ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ (84) ಅವರು ನಿಧನರಾಗಿದ್ದಾರೆ. ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದ ನಾರಾಯಣ ಗಾಣಿಗರು ದ್ರೌಪದಿ, ಮಂಡೋದರಿ, ಮೋಹಿನಿ ಸ್ತ್ರೀ ಪಾತ್ರಗಳಲ್ಲಿ ಹೆಸರುಗಳಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ತಮ್ಮ ಮನೋಜ್ಞ ಅಭಿನಯದಿಂದ ಮೂರು ದಶಕಗಳಿಗೂ ಹೆಚ್ಚುಕಾಲ ಮಂದಾರ್ತಿ, ಮಾರಣಕಟ್ಟೆ, ಇಡಗುಂಜಿ,ಪೆರ್ಡೂರು, ಸಾಲಿಗ್ರಾಮ ಯಕ್ಷಗಾನ ಮೇಳಗಳಲ್ಲಿ ದುಡಿದಿದ್ದ ಇವರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳು ದೊರಕಿವೆ.

- Advertisement -

Latest News

error: Content is protected !!