
ನೆಲ್ಯಾಡಿ ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ ಚಾಮುಂಡೇಶ್ವರಿ ಭಜನಾ ಮಂಡಳಿ ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 08, 2025 ಶುಕ್ರವಾರದಂದು 16 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ (ಪೂಜೆ) ನಡೆಯಿತು.
ಈ ವೇಳೆ ಬೆಳ್ತಂಗಡಿಯ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಅವರ ಧರ್ಮ ಪತ್ನಿಯಾದ ತಾರಾ ಕಿರಣ್ ಚಂದ್ರ ಡಿ ಪುಷ್ಪಗಿರಿ ಅವರು ಪ್ರಸಾದ ರೂಪದಲ್ಲಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸೀರೆ ದಾನ ಮಾಡಿದರು. ಬಳಿಕ ಧಾರ್ಮಿಕ ಸಭೆ ನಡೆಯಿತು. ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವಕ್ಲು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗವಹಿಸಿದ್ದರು. ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಡಾ| ಗೀತಾ ಕುಮಾರಿ ಟಿ. ಧಾರ್ಮಿಕ ಉಪನ್ಯಾಸ ನೀಡಿದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆ ವೈದ್ಯ ಡಾ | ಶಮಂತ್ ವೈ.ಕೆ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯ ಸ್ಕೂಲ್ ಕೌನ್ಸಿಲರ್ ನಿವೇದಿತಾ ಪ್ರಸನ್ನ ಈ ವೇಳೆ ಉಪಸ್ಥಿತರಿದ್ದರು.


