Saturday, June 6, 2026
Homeತಾಜಾ ಸುದ್ದಿವರಮಹಾಲಕ್ಷ್ಮಿ ಹಬ್ಬಕ್ಕೆ ನಾಡಿನ ಜನತೆಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ವರಮಹಾಲಕ್ಷ್ಮಿ ಹಬ್ಬಕ್ಕೆ ನಾಡಿನ ಜನತೆಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ

- Advertisement -
- Advertisement -

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಡಿಕೆಶಿವಕುಮಾರ್ ಸೇರಿ ಹಲವು ಗಣ್ಯರು ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಮನವಿ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಎರಡನೇ ಶ್ರಾವಣ ಶುಕ್ರವಾರದಂದು ಆಚರಿಸುವ ವರಮಹಾಲಕ್ಷ್ಮಿ ವ್ರತ ಎಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಆಯುಷ್ಯ, ಆರೋಗ್ಯ ಮತ್ತು ಐಶ್ವರ್ಯ ಕರುಣಿಸಲಿ ಎಂದು ಆ ಜಗನ್ಮಾತೆಯನ್ನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಶುಭಾಶಯ ಕೋರಿದ್ದು, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ವೃತದ ಹಾರ್ದಿಕ ಶುಭಾಶಯಗಳು. ವರಮಹಾಲಕ್ಷ್ಮಿಯು ಆರೋಗ್ಯ, ಐಶ್ವರ್ಯ, ಸುಖ- ಶಾಂತಿ ಸಮೃದ್ಧಿಯನ್ನು ನೀಡಿ ಹರಸಲಿ. ಕೊರೊನ ಹಿನ್ನೆಲೆಯಲ್ಲಿ, ಹಬ್ಬದ ಸಂದರ್ಭದಲ್ಲಿ ಎಚ್ಚರ ವಹಿಸಲು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!