Friday, June 5, 2026
Homeತಾಜಾ ಸುದ್ದಿಪರಪ್ಪನ ಅಗ್ರಹಾರದಿಂದ ವರ್ತೂರ್ ಸಂತೋಷ್ ರಿಲೀಸ್

ಪರಪ್ಪನ ಅಗ್ರಹಾರದಿಂದ ವರ್ತೂರ್ ಸಂತೋಷ್ ರಿಲೀಸ್

- Advertisement -
- Advertisement -

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಗೆ ಇಂದು ಜಾಮೀನು ದೊರೆತಿದ್ದು, ಅದರ ಬೆನ್ನಲ್ಲೇ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಬಿಗ್ ಬಾಸ್ ಮನೆಯಿಂದಲೇ ಸ್ಪರ್ಧಿ ವರ್ತೂರು ಸಂತೋಷ್ ಅನ್ನು ಅರಣ್ಯಾಧಿಕಾರಿಗಳು ಹುಲಿ ಉಗುರು ಪೆಂಡೆಂಟ್ ಧರಿಸಿದ್ದಂತ ಆರೋಪದ ಹಿನ್ನಲೆಯಲ್ಲಿ ಬಂಧಿಸಿದ್ದರು. ಆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ಮೂಲಕ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ 2ನೆ ಎಸಿಜೆಎಂ ನ್ಯಾಯಾಲಯಕ್ಕೆ ಅವರ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನಿನ್ನೆಯಷ್ಟೇ ಇದಕ್ಕೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಕೂಡ ಸಲ್ಲಿಸಿದ್ದರು. ಈ ಬಳಿಕ ಇಂದು ಅರ್ಜಿಯ ವಿಚಾರಣೆ ನಡೆಸಿದಂತ 2ನೇ ಎಸಿಜೆಎಂ ನ್ಯಾಯಾಲಯವು ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.4 ಸಾವಿರ ನಗದು ಭದ್ರತೆ ಅಥವಾ ಒಬ್ಬರ ಶೂರಿಟಿಯೊಂದಿಗೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಈ ಬಳಿಕ ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಿಡುಗಡೆಯಾಗಿ ಹೊರ ಬಂದಿದ್ದಾರೆ.

- Advertisement -

Latest News

error: Content is protected !!