Friday, June 26, 2026
Homeಕರಾವಳಿಮಂಗಳೂರುಶಾಸಕರ ಜೊತೆ ವಾಗ್ವಾದದ ಬೆನ್ನಲ್ಲೇ ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿದ್ದ...

ಶಾಸಕರ ಜೊತೆ ವಾಗ್ವಾದದ ಬೆನ್ನಲ್ಲೇ ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿದ್ದ ವೇದಶ್ರೀ ನಿಡ್ಯಾ ಅಮಾನತು

- Advertisement -
- Advertisement -

ಪುತ್ತೂರು; ಶಾಸಕರ ಜೊತೆ ವಾಗ್ವಾದದ ಬೆನ್ನಲ್ಲೇ ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿದ್ದ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಲಾಗಿದೆ. ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಿದ್ದಾರೆ.

ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ತರಗತಿಯ ಪಕ್ಕದಲ್ಲಿಯೇ ನಡೆಯುತ್ತಿರುವ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದಾಗಿ ಉಂಟಾಗುವ ಧೂಳಿನಿಂದಾಗಿ ತರಗತಿಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ತರಗತಿಯಿಂದ ಹೊರಬಂದು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ್ದರು. ಈ ವಿದ್ಯಾರ್ಥಿಗಳ ಈ ಪ್ರತಿಭಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಅಲ್ಲದೆ ಈ ಪ್ರತಿಭಟನೆಯ ವೇಳೆ ವಿಧ್ಯಾರ್ಥಿನಿಯರ ಪರವಾಗಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿದ್ದ ವೇದಶ್ರೀ ನಿಡ್ಯಾ ನಿಂತಿದ್ದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಶಾಸಕ ಅಶೋಕ್ ರೈ ಅವರ ಜೊತೆ ಮಾತಿನ ಚಕಮಕಿ ಕೂಡ ನಡೆದಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ವೇದಶ್ರೀ ನಿಡ್ಯಾ ಅವರನ್ನು ವಿಧ್ಯಾರ್ಥಿನಿಯರ ಪ್ರತಿಭಟನೆಗೆ ಸಹಕಾರ ನೀಡಿದ ಆರೋಪ ಹಾಗೂ ಶೈಕ್ಷಣಿಕ ಹಾಗು ಆಡಳಿತಾತ್ಮಕ ಜವಾಬ್ದಾರಿ ಸಮರ್ಪಕ‌ವಾಗಿ ನಿರ್ವಹಿಸದ ಆರೋಪದಲ್ಲಿ ಅಮಾನತು ಮಾಡಲಾಗಿದೆ.

- Advertisement -

Latest News

error: Content is protected !!