Saturday, October 17, 2026
Homeಕರಾವಳಿಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವೇದವ್ಯಾಸ್ ಕಾಮತ್ ಬೆಂಬಲ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವೇದವ್ಯಾಸ್ ಕಾಮತ್ ಬೆಂಬಲ

- Advertisement -
- Advertisement -

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆ ಸಂಪೂರ್ಣ ನ್ಯಾಯಯುತವಾಗಿದ್ದು, ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಮಂಗಳೂರು ನಗರವು ಬಸ್, ರೈಲು ಮತ್ತು ವಿಮಾನದಂತಹ ಅತ್ಯುತ್ತಮ ಸಾರಿಗೆ ಸಂಪರ್ಕ ಹೊಂದಿದ್ದು, ಇಲ್ಲಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣವು ಪೀಠದ ಸ್ಥಾಪನೆಗೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಹೊಂದಿದೆ. ಹೀಗಿರುವಾಗ ಕೆಲವು ವ್ಯಕ್ತಿಗಳು ಬೇರೆ ಜಿಲ್ಲೆಯಲ್ಲಿ ಪೀಠ ಸ್ಥಾಪಿಸುವಂತೆ ಒತ್ತಾಯಿಸುತ್ತಿರುವುದು ಸರಿಯಲ್ಲ. ಆದ್ದರಿಂದ, ಮಂಗಳೂರಿನಲ್ಲಿಯೇ ಹೈಕೋರ್ಟ್ ಪೀಠ ಸ್ಥಾಪನೆಯಾಗಲು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ನಾಯಕರು ಮತ್ತು ಮುಖಂಡರು ಪಕ್ಷಾತೀತವಾಗಿ ಒಕ್ಕೊರಲಿನಿಂದ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ ಎಂದು ಶಾಸಕರು ಕರೆ ನೀಡಿದ್ದಾರೆ.

- Advertisement -

Latest News

error: Content is protected !!