Monday, June 8, 2026
Homeಕರಾವಳಿಪ್ರವೀಣ್ ನೆಟ್ಟಾರ್ ಹತ್ಯೆಗೈದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಮನವಿ

ಪ್ರವೀಣ್ ನೆಟ್ಟಾರ್ ಹತ್ಯೆಗೈದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಮನವಿ

- Advertisement -
- Advertisement -

ಮಂಗಳೂರು : ಹಿಂದೂ‌ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೈದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದಾರೆ.

ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿರುವ ಶಾಸಕ ಕಾಮತ್, ಹತ್ಯೆಯ ಹಿಂದೆ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕೈವಾಡವಿದೆ. ದೇಶ ವಿರೋಧಿ ಮಾನಸಿಕತೆಯಲ್ಲಿರುವ ಮತಾಂಧ ಶಕ್ತಿಗಳು ಭಯೋತ್ಪಾದನೆ ಸೃಷ್ಟಿಸಲು ರಾಷ್ಟ್ರೀಯವಾದಿ ಯುವಕನ ಹತ್ಯೆ ಮಾಡಿದ್ದಾರೆ. ಕರಾವಳಿಯಲ್ಲಿ ನೆಲೆಯೂರುತ್ತಿರುವ ಉಗ್ರರನ್ನು ಬುಡ ಸಮೇತ ಕಿತ್ತು ಹಾಕಲು ಕಠಿಣ ಕಾನೂನು ರೂಪಿಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ

- Advertisement -

Latest News

error: Content is protected !!