Thursday, June 4, 2026
Homeತಾಜಾ ಸುದ್ದಿತೆಲಂಗಾಣದಲ್ಲಿ ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ವೀಕ್ಷಿಸಿದ ಶಾಸಕ ವೇದವ್ಯಾಸ ಕಾಮತ್

ತೆಲಂಗಾಣದಲ್ಲಿ ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ವೀಕ್ಷಿಸಿದ ಶಾಸಕ ವೇದವ್ಯಾಸ ಕಾಮತ್

- Advertisement -
- Advertisement -

ಹೈದರಾಬಾದ್: ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಅನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೆಲಂಗಾಣ ರಾಜ್ಯದಲ್ಲಿ ಟಿವಿ ಮೂಲಕ ವೀಕ್ಷಿಸಿದರು.

ತೆಲಂಗಾಣದ ಸಾದ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರಾದ ಮಟ್ಟಮ್ ರಾಚಯ್ಯ ಅವರ ಮನೆಯಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ವೀಕ್ಷಿಸಿದರು.

ತೆಲಂಗಾಣ ವಿಧಾನಸಭಾ ಚುನಾವಣಾ ತಯಾರಿಗಾಗಿ ಬಿಜೆಪಿಯಿಂದ ಜವಾಬ್ದಾರಿ ವಹಿಸಲ್ಪಟ್ಟಿರುವ ಶಾಸಕ ವೇದವ್ಯಾಸ ಕಾಮತ್ ಕಳೆದ ಒಂದು ವಾರದಿಂದ ತೆಲಂಗಾಣದಲ್ಲಿ ಚುನಾವಣಾ ಪೂರ್ವ ಸಿದ್ಧತಾ ಸಭೆಗಳಲ್ಲಿ ತೊಡಗಿದ್ದಾರೆ.

ಇನ್ನು ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಲೇ ಮೊಬೈಲ್ ಫೋನ್ ಮೂಲಕ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ವೀಕ್ಷಣೆ ಮಾಡಿದರು.

- Advertisement -

Latest News

error: Content is protected !!