Saturday, May 11, 2024
Homeಕರಾವಳಿಪುತ್ತೂರಿನಲ್ಲಿ ಬ್ಯಾನರ್ ವಿಚಾರಕ್ಕೆ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಡಿವೈಸ್ಪಿ ಡಾ|ವೀರಯ್ಯ ಹಿರೇಮಠ್ ಜಾಮೀನಿನ...

ಪುತ್ತೂರಿನಲ್ಲಿ ಬ್ಯಾನರ್ ವಿಚಾರಕ್ಕೆ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಡಿವೈಸ್ಪಿ ಡಾ|ವೀರಯ್ಯ ಹಿರೇಮಠ್ ಜಾಮೀನಿನ ಮೇಲೆ ಬಿಡುಗಡೆ

spot_img
- Advertisement -
- Advertisement -

ಪುತ್ತೂರಿನಲ್ಲಿ ಬ್ಯಾನರ್ ವಿಚಾರಕ್ಕೆ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪ ಹೊತ್ತಿದ್ದ ಡಿವೈಸ್ಪಿ ಡಾ|ವೀರಯ್ಯ ಹಿರೇಮಠ್ ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಪುತ್ತೂರಿನ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ್ದ ಯುವಕರನ್ನು ಬಂಧಿಸಿ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.

 ಈ ಪ್ರಕರಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಒತ್ತಾಯ ಕೇಳಿ ಬಂದಿತ್ತು.  ಈ ಬೆನ್ನಲ್ಲೇ ಪೊಲೀಸರಿಂದ ಹಲ್ಲೆಗೊಳಗಾಗಿದ್ದ ಯುವಕ ಅವಿನಾಶ್ ಎಂಬವರ ತಂದೆ ವೇಣುನಾಥ ನರಿಮೊಗರು ಎಂಬವರು ಡಿವೈಎಸ್ಪಿ ಪುತ್ತೂರು, ಪಿಎಸ್‌ಐ ಪುತ್ತೂರು ಗ್ರಾಮಾಂತರ ಮತ್ತು ಗ್ರಾಮಾಂತರ ಕಾನ್‌ಸ್ಟೇಬಲ್ ಹರ್ಷಿತ್‌ರವರ ವಿರುದ್ಧ ದೂರು ನೀಡಿದ್ದರು. ಅದರಂತೆ ಸೆಕ್ಷನ್ 323,324,506r/w 34ಐಪಿಸಿಯಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಗೆ ಸಂಬಂಧಿಸಿ ಸಂಪ್ಯದ ಆಗಿನ ಎಸ್.ಐ.ಶ್ರೀನಾಥ್ ರೆಡ್ಡಿ ಮತ್ತು ಕಾನ್‌ಸ್ಟೇಬಲ್ ಹರ್ಷಿತ್ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಡಿವೈಎಸ್ಪಿ ವಿರುದ್ಧವೂ ಕ್ರಮಕೈಗೊಳ್ಳಬೇಕು ಎನ್ನುವ ಆಗ್ರಹ ವ್ಯಕ್ತವಾಗಿತ್ತು. ಘಟನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳುವುದಾಗಿ ಎಡಿಜಿಪಿ ಅಲೋಕ್ ಕುಮಾರ್ ಅವರು ಭರವಸೆ ನೀಡಿದ್ದರು. ಬಳಿಕದ ಬೆಳವಣಿಗೆಯಲ್ಲಿ ಡಿವೈಎಸ್ಪಿ ವೀರಯ್ಯ ಹಿರೇಮಠ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು. .ಇದೀಗ ಡಿವೈಎಸ್ಪಿ ವೀರಯ್ಯ ಹಿರೇಮಠ ಅವರು ಜೂ.16ರಂದು ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್‌ಸ್ಟೇಬಲ್ ಹರ್ಷಿತ್ ಎಂಬವರನ್ನು ಈಗಾಗಲೇ ಸೇವೆಯಿಂದ ಅಮಾನತುಗೊಳಿಸಲಾಗಿದೆ.

- Advertisement -
spot_img

Latest News

error: Content is protected !!