
ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಲು ಮಾಜಿ ಸಿಎಂ ವೀರಪ್ಪ ಮೊಯ್ಲಿ ಇಂದು ಯೆನಪೋಯ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಆಸ್ಕರ್ ಅವರು ತೀವ್ರ ನಿಗಾ ಘಟಕದಲ್ಲಿರುವುದರಿಂದ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ಹೀಗಾಗಿ ಅವರ ಕುಟುಂಬದವರ ಜೊತೆ ಕೆಲ ಸಮಯ ಮಾತುಕತೆ ನಡೆಸಿ, ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇನ್ನು ಸಿಎಂ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು ,ಸಿಎಂ ಬದಲಾವಣೆ ವಿಚಾರ ಬಿಜೆಪಿಗೆ ಬಿಟ್ಟದ್ದು. ಬಿಜೆಪಿ ಸಂಪ್ರದಾಯದ ಪ್ರಕಾರ ಭ್ರಷ್ಟರನ್ನು, ಅಧಕ್ಷರನ್ನು ತೆಗೆಯುವ ವಿಧಾನ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ತಿಳಿದಿದೆ ಎಂದಿದ್ದಾರೆ.
ಎಐಸಿಸಿ ಕೇರಳ ಉಸ್ತುವಾರಿ ಪಿ.ವಿ.ಮೋಹನ್, ಕೆಪಿಸಿಸಿ ಕಾರ್ಯದರ್ಶಿ ಡಾ.ಆನಂದ್‍ಕುಮಾರ್, ಸಯ್ಯದ್ ನಾಸೀರ್ ಹುಸೇನ್ ಮುಂತಾದವರು ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಐಸಿಸಿ ಕೇರಳ ಉಸ್ತುವಾರಿ ಪಿ.ವಿ.ಮೋಹನ್, ಕೆಪಿಸಿಸಿ ಕಾರ್ಯದರ್ಶಿ ಡಾ.ಆನಂದ್‍ಕುಮಾರ್, ಸಯ್ಯದ್ ನಾಸೀರ್ ಹುಸೇನ್ ಮುಂತಾದವರು ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಿದ್ದಾರೆ.


