Sunday, June 7, 2026
Homeಕರಾವಳಿಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ  ಹತ್ಯೆಯನ್ನು ಖಂಡಿಸಿದ ವೀರೇಂದ್ರ ಹೆಗ್ಗಡೆ

ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ  ಹತ್ಯೆಯನ್ನು ಖಂಡಿಸಿದ ವೀರೇಂದ್ರ ಹೆಗ್ಗಡೆ

- Advertisement -
- Advertisement -

ಮಂಗಳೂರು: ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ವಿಷಯ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಇತಿಹಾಸದಲ್ಲಿಯೇ ದಿಗಂಬರ ಮುನಿಗಳನ್ನು ಈ ರೀತಿಯಾಗಿ ಹತ್ಯೆ ಮಾಡಿರುವುದು ಇದೇ ಪ್ರಥಮ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ನಿಜಕ್ಕೂ ಆಘಾತ ತಂದಿದೆ. ಇದು ಖಂಡನೀಯ ಎಂದಿದ್ದಾರೆ.

ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಾಗುತ್ತದೆ. ಮುನಿಗಳಿಗೆ ಯಾವ ಕಾರಣಕ್ಕಾಗಿ ಈ ಉಪ ಸರ್ಗ ಎಂಬುದು ಗೊತ್ತಿಲ್ಲ ಎಂದರು.

ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಸರ್ಕಾರ, ಪೊಲೀಸರಿಗೆ ಅಭಿನಂದಿಸುವುದಾಗಿ ಹೇಳಿದರು. ಅಲ್ಲದೇ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!