Monday, June 30, 2025
Homeಕರಾವಳಿಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯನ್ನು ಅಭಿನಂದಿಸಿ ಸರ್ಕಾರಕ್ಕೆ ಪತ್ರ ಬರೆದು ಅಭಿನಂದಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ...

ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯನ್ನು ಅಭಿನಂದಿಸಿ ಸರ್ಕಾರಕ್ಕೆ ಪತ್ರ ಬರೆದು ಅಭಿನಂದಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ

spot_img
- Advertisement -
- Advertisement -

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಯೋಜನೆಯಿಂದಾಗಿ ಮಹಿಳಾ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದೆ.

 ಇನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು, ರಾಜ್ಯ ಸರಕಾರದ ‘ಶಕ್ತಿ’ ಯೋಜನೆಗೂ ಮೆಚ್ಚುಗೆ ವ್ಯಕ್ತಪಡಿಸಿ, ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂಗೆ ಡಿ.ವೀರೇಂದ್ರ ಹೆಗ್ಗಡೆ ಬರೆದ ಪತ್ರದಲ್ಲಿ ಏನಿದೆ?

‘ಅನೇಕ ಯೋಜನೆಗಳ ಮೂಲಕ ಸಿದ್ದರಾಮಯ್ಯ ಅವರು ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದು, ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸಿದ್ದು, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು, ತಮಗೆ ಅವಕಾಶವಿದ್ದಾಗ ಕ್ಷೇತ್ರಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕು ಎಂದು ಡಿ.ವೀರೇಂದ್ರ ಹೆಗ್ಗಡೆ ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!