Monday, May 6, 2024
Homeಕರಾವಳಿಚಾರ್ಮಾಡಿಯಲ್ಲಿ ಮಿನಿ ಗೂಡ್ಸ್ ವಾಹನ ಪಲ್ಟಿ : ಚಾಲಕ ಪ್ರಾಣಾಪಾಯದಿಂದ ಪಾರು

ಚಾರ್ಮಾಡಿಯಲ್ಲಿ ಮಿನಿ ಗೂಡ್ಸ್ ವಾಹನ ಪಲ್ಟಿ : ಚಾಲಕ ಪ್ರಾಣಾಪಾಯದಿಂದ ಪಾರು

spot_img
- Advertisement -
- Advertisement -

ಬೆಳ್ತಂಗಡಿ : ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಬಾರಿ ಮಳೆಯಿಂದ ಮಿನಿ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಅಲ್ಯೂಮಿನಿಯಂ ವಸ್ತುಗಳನ್ನು ಕೊಂಡೊಯ್ಯುವಾಗ ಈ ವಾಹನ ಪಲ್ಟಿಯಾಗಿದೆ.

ತಿರುವುಗಳು ಇದ್ದ ಕಾರಣ ಮಳೆಗೆ ಜಾರಿ, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆ ಕೂಡಲೇ ಧಾವಿಸಿದ ಸ್ಥಳೀಯ ಸಮಾಜ ಸೇವಕ, ಆಪದ್ಭಾಂಧವ ಚಾರ್ಮಾಡಿ ಹಸನಬ್ಬ ಅವರು ಜಖಂ ಆಗಿದ್ದ ವಾಹನ ಮೇಲೆತ್ತಲು ಸಹಾಯ ಮಾಡಿದ್ದಾರೆ.
ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟ್ ನ ಸ್ಥಿತಿ ಅಪಾಯಕಾರಿಯಾಗಿದ್ದು, ಮಳೆಗಾಲದಲ್ಲಿ ಇನ್ನಷ್ಟು ಸಮಸ್ಯೆಗಳನ್ನು ತಂದೊಡ್ಡುವ ಸಾಧ್ಯತೆ ನಿಚ್ಛಳವಾಗಿದೆ.

- Advertisement -
spot_img

Latest News

error: Content is protected !!