- Advertisement -
![]()
- Advertisement -
ಪುತ್ತೂರು; ಅಕ್ರಮ ಗೋ ಸಾಗಾಟ ಮಾಡುತ್ತಿದ್ದಾಗ ವಾಹನ ಕೈ ಕೊಟ್ಟ ಪರಿಣಾಮ ಗೋವುಗಳನ್ನು ನಡುರಸ್ತೆಯಲ್ಲೇ ಬಿಟ್ಟು ಆರೋಪಿಗಳು ಪರಾರಿಯಾದ ಘಟನೆ ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ಇಂದು ಶನಿವಾರ ಮುಂಜಾನೆ ಸುಮಾರು 5 ಗಂಟೆಗೆ ವೇಳೆಗೆ ನಡೆದಿದೆ.
ಮಾಹಿತಿ ಪಡೆದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಕಾರ್ಯಕರ್ತರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಾರಿಸುದಾರರಿಲ್ಲದ ಈ ಗೋವುಗಳನ್ನು ಕಳವು ಮಾಡಿ ಸಾಗಾಟ ಮಾಡಿರುವ ಸಂಶಯ ವ್ಯಕ್ತವಾಗಿದ್ದು, ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಗ್ರಹಿಸಿದೆ.
- Advertisement -


