- Advertisement -
- Advertisement -
ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ನಲ್ಲಿ ರಸ್ತೆ ಸಂಚಾರವನ್ನು ಪೂರ್ಣ ಬಂದ್ ಮಾಡಲಾಗಿದೆ.
ಸಂಚಾರ ನಿರ್ಬಂಧಿಸಲಾಗಿದ್ದು ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಎರಡನೇ ಬಾರಿಗೆ ಗುಡ್ಡ ಕುಸಿದಿರುವ ಕಾರಣ ಮಣ್ಣಿನ ರಾಶಿಯನ್ನು ತೆರವುಗೊಳಿಸುವವರೆಗೂ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿರಲಿದೆ.

ತುರ್ತು ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿ ದೂರವಾಣಿ ಸಂಖ್ಯೆ 08172-261111 ಅಥವಾ ಉಚಿತ ಸಹಾಯವಾಣಿ 1077 ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಇಂದು ಸಂಭವಿಸಿರುವ ಭೂ ಕುಸಿತದಿಂದ ಮಣ್ಣಿನ ರಾಶಿಯಲ್ಲಿ ಎರಡು ಕಂಟೈನರ್ ಹಾಗೂ ಒಂದು ಟ್ಯಾಂಕರ್ ಸಿಲುಕಿಕೊಂಡಿದ್ದು, ಮತ್ತೆ ಭೂ ಕುಸಿತದ ಆತಂಕ ಎದುರಾಗಿದೆ.
- Advertisement -