Thursday, June 25, 2026
Homeತಾಜಾ ಸುದ್ದಿಆಗುಂಬೆ ಘಾಟ್ ನಲ್ಲಿ ಲಘು ವಾಹನ ಸಂಚಾರ ಆರಂಭ

ಆಗುಂಬೆ ಘಾಟ್ ನಲ್ಲಿ ಲಘು ವಾಹನ ಸಂಚಾರ ಆರಂಭ

- Advertisement -
- Advertisement -

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ 11 ನೇ ತಿರುವಿನಲ್ಲಿ ಗುಡ್ಡ ಕುಸಿದು ಬಂದ್ ಆಗಿದ್ದ ಹೆದ್ದಾರಿಯಲ್ಲಿ ವಾಹನ ಸಂಚಾರ ಪುನರಾರಂಭಗೊಂಡಿದೆ.

ಮಲೆನಾಡಿನಲ್ಲಿ ಧಾರಾಕಾರ ಮಳೆಯಾಗಿದ್ದ ಹಿನ್ನಲೆಯಲ್ಲಿ ಗುಡ್ಡ ಕುಸಿದಿದ್ದ ಕಾರಣ ಕಳೆದ ಮೂರು ದಿನಗಳಿಂದ ತೀರ್ಥಹಳ್ಳಿ- ಉಡುಪಿ ರಾಜ್ಯ ಹೆದ್ದಾರಿ ಬಂದ್ ಆಗಿತ್ತು.

ನಿರಂತರ‌ ಮಣ್ಣು ತೆರವು ಕಾರ್ಯಾಚರಣೆಯ ಬಳಿಕ ಈಗ
ಬೈಕ್ ಮತ್ತು ಕಾರ್ ಮತ್ತು ಸಣ್ಣ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಆಗುಂಬೆ ಘಾಟ್ ನಲ್ಲಿ ಮಣ್ಣು ಕುಸಿದು ಸಂಚಾರ ಸಮಸ್ಯೆ ಆಗಿದ್ದ ಹಿನ್ನೆಲೆಯಲ್ಲಿ ತಕ್ಷಣ ತೆರವು ಕಾರ್ಯಾಚರಣೆ ನಡೆಸುವಂತೆ ಶಿವಮೊಗ್ಗ ಜಿಲ್ಲಾಡಳಿತಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಇಂಧನ ಸಚಿವ ಸುನೀಲ್ ಕುಮಾರ್ ಸೂಚನೆ ನೀಡಿದ್ದರು.

- Advertisement -

Latest News

error: Content is protected !!