Thursday, May 16, 2024
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧ : ಜಿಲ್ಲಾಡಳಿತದಿಂದ ಮಹತ್ವದ ಸೂಚನೆ

ಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧ : ಜಿಲ್ಲಾಡಳಿತದಿಂದ ಮಹತ್ವದ ಸೂಚನೆ

spot_img
- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನ ಸೌಂದರ್ಯವನ್ನು ವೀಕ್ಷಿಸಲು ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಲಾಕ್ ಡೌನ್ ಸಡಿಲಗೊಳ್ಳುತ್ತಿದ್ದಂತೆ ಪ್ರವಾಸಿಗರು ಚಾರ್ಮಾಡಿ ಜಲಧಾರೆಯ ದೃಶ್ಯ ವೈಭವ ನೋಡೋದಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇದೀಗ ಜಿಲ್ಲಾಡಳಿತ ಪ್ರವಾಸಿಗರಿಗೆ ಮಹತ್ವದ ಸೂಚನೆ ಹೊರಡಿಸಿದ್ದು, ಚಾರ್ಮಾಡಿ ಘಾಟ್ ನಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧ ಮಾಡಿದೆ. ಶಿರಾಡಿ ಘಾಟ್ ನಲ್ಲಿ ಸಂಚಾರ ಬಂದ ಆದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಹೆಚ್ಚಳವಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಚಾರ್ಮಾಡಿ ಘಾಟ್ ನಲ್ಲಿ ಇನ್ನುಮುಂದೆ ವಾಹನ ನಿಲ್ಲಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಹಾಗೂ ಘಾಟ್ ನಲ್ಲಿ ಪ್ರವಾಸಿಗರ ವಾಹನದ ಮೇಲೆ ಕಣ್ಣಿಡಲು ಹೈವೇ ಪೆಟ್ರೋಲ್ ನಿಯೋಜಸಲಾಗಿದೆ.

- Advertisement -
spot_img

Latest News

error: Content is protected !!