
ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ಬೀದಿಬದಿ ವ್ಯಾಪಾರಿಗಳ ಪುನರ್ವಸತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲು ವಿರೋಧ ಪಕ್ಷ ಸೇರಿದಂತೆ ಎಲ್ಲ ಶಾಸಕರು ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮುಖ್ಯ ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವರನ್ನು ತೆರವುಗೊಳಿಸುವಂತೆ ಜನರಿಂದಲೂ ಒತ್ತಡವಿತ್ತು. ಹೀಗಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯಾಪಾರಿಗಳಿಗೆ ಮುಖ್ಯ ರಸ್ತೆಗಳ ಬದಲಿಗೆ ಬೇರೆಡೆ ಸೂಕ್ತ ಪರ್ಯಾಯ ಸ್ಥಳಾವಕಾಶ ಕಲ್ಪಿಸಿಕೊಡಲಾಗುವುದು.
ನಗರದಲ್ಲಿ ಈಗಾಗಲೇ ಸುಮಾರು 60,000 ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಲಾಗಿದ್ದು, ಈ ಪೈಕಿ ನೋಂದಣಿ ಮಾಡಿಸಿಕೊಂಡಿರುವ 37,000 ವ್ಯಾಪಾರಿಗಳಿಗೆ ಶೀಘ್ರದಲ್ಲೇ ಸರ್ಕಾರದಿಂದ ವಾಹನಗಳನ್ನು ವಿತರಿಸುವ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.


