Friday, June 5, 2026
Homeಕರಾವಳಿಸಚಿವ ಎಸ್.ಅಂಗಾರರಿಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆ; ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಹಿರಿಯ...

ಸಚಿವ ಎಸ್.ಅಂಗಾರರಿಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆ; ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಹಿರಿಯ ಮುಖಂಡ ವೆಂಕಟ್ ವಳಲಂಬೆ ರಾಜೀನಾಮೆ

- Advertisement -
- Advertisement -

ಸುಳ್ಯ: ಸಚಿವ ಎಸ್.ಅಂಗಾರರಿಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಹಿರಿಯ ಮುಖಂಡ ವೆಂಕಟ್ ವಳಲಂಬೆ ರಾಜೀನಾಮೆ ನೀಡಿದ್ದಾರೆ.

ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಎಸ್.ಅಂಗಾರರಂತಹ ಪ್ರಾಮಾಣಿಕ ನಾಯಕನ ಜೊತೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿರುತ್ತದೆ.ಆದುದರಿಂದ ನನ್ನ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಈ ಕ್ಷಣದಿಂದಲೇ ರಾಜೀನಾಮೆ ನೀಡಿರುತ್ತೇನೆ ಎಂದು ಜಿಲ್ಲಾ ಅಧ್ಯಕ್ಷರಾದ ಸುದರ್ಶನ ಮೂಡಬಿದಿರೆ ಇವರಿಗೆ ರಾಜೀನಾಮೆ ಸಲ್ಲಿಸಿರುತ್ತೇನೆ ಎಂದು ವೆಂಕಟ್ ವಳಲಂಬೆ ತಿಳಿಸಿದ್ದಾರೆ‌.

- Advertisement -

Latest News

error: Content is protected !!