Saturday, June 28, 2025
Homeಕರಾವಳಿಮಂಗಳೂರುಮಂಗಳೂರು; ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿ ಕೊಂಬೆಯ ಭಾಗವನ್ನು ಹೊರ ತೆಗದು ಬಾಲಕನ ಜೀವ ಉಳಿಸಿದ...

ಮಂಗಳೂರು; ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿ ಕೊಂಬೆಯ ಭಾಗವನ್ನು ಹೊರ ತೆಗದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

spot_img
- Advertisement -
- Advertisement -

ಮಂಗಳೂರು; ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿ ಕೊಂಬೆಯ ಭಾಗವನ್ನು ಹೊರ ತೆಗದು ವೆನ್ಲಾಕ್ ಆಸ್ಪತ್ರೆಯ ವೈದ್ಯರು ಬಾಲಕನ ಜೀವ ಉಳಿಸಿದ್ದಾರೆ.

ಅಸ್ಸಾಂ ರಾಜ್ಯದ ಗುವಾಹಟಿ ಮೂಲದವನಾದ ಬಾಲಕ ಕಮಲ್ ಹುಸೇನ್(12)ನ ಪೋಷಕರು ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಸಂಜೆಯ ಬಾಲಕ ಮನೆಯ ಬಳಿ ಆಟವಾಡುತ್ತಿದ್ದಾಗ ಹತ್ತಿರವೇ ಇದ್ದ ತೆಂಗಿನಮರದ ಗರಿಯೊಂದು ಬಾಲಕನ ಮೇಲೆ ಬಿದ್ದು ಅನಾಹುತ ಸಂಭವಿಸಿತ್ತು. ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು. ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹುಡುಗನಿಗೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಕೂಡಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು.  ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವೆನ್ಲಾಕ್ ಆಸ್ಪತ್ರೆಯ ಎದೆ ಮತ್ತು ರಕ್ತನಾಳಗಳ ಶಸ್ತ್ರಚಿಕಿತ್ಸಕರಾದ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡ, ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಮರದ ತುಂಡಿನೊಂದಿಗೆ ಎದೆಗೆ ಹೊಕ್ಕಿದ್ದ ಸ್ಟೀಲ್ ಚೈನ್  ನ್ನು  ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಮಧ್ಯರಾತ್ರಿ 1.30 ರಿಂದ 3.30 ರವರೆಗೆ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಸರ್ಕಾರಿ ಆಸ್ಪತ್ರೆಯ ವೈದ್ಯರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

- Advertisement -
spot_img

Latest News

error: Content is protected !!