ವೇಣೂರು: ಕೆಲಸದ ಸ್ಥಳಕ್ಕೆ ಬಂದು ದಲಿತ ಯುವತಿಯೊಂದಿಗೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಬಂಧಿತ ಆರೋಪಿ.
ಪರಿಶಿಷ್ಟ ಜಾತಿಗೆ ಸೇರಿದ ಸಂತ್ರಸ್ತ ಯುವತಿಯು ಅಕ್ಟೋಬರ್ 24ರಂದು ಮಧ್ಯಾಹ್ನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸೈಯ್ಯದ್ ಮಹಮ್ಮದ್ ಇಸಾಕ್, ಸಾರ್ವಜನಿಕ ಸ್ಥಳದಲ್ಲೇ ಆಕೆಯೊಂದಿಗೆ ಅಸಭ್ಯವಾಗಿ ಮಾತನಾಡಿದ್ದಾನೆ. ಅಲ್ಲದೆ, ಹಣದ ಆಮಿಷ ಒಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂತ್ರಸ್ಥೆ ನೀಡಿದ ದೂರಿನನ್ವಯ ವೇಣೂರು ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ (BNS) ಕಾಯ್ದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ (SC/ST Atrocities Act) ಕಾಯ್ದೆಯಡಿ (ಅ.ಕ್ರ 73/2026) ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.


