Wednesday, June 3, 2026
Homeಕರಾವಳಿವೇಣೂರು: ಅಕ್ರಮ ಮರಳು ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ

ವೇಣೂರು: ಅಕ್ರಮ ಮರಳು ಅಡ್ಡೆಗೆ ಬಂಟ್ವಾಳ ಎಎಸ್ಪಿ ದಾಳಿ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಮಣಿ ಎಂಬಲ್ಲಿ ನದಿ ಪಾತ್ರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಎಎಸ್ಪಿ ಶಿವಸೂ ರಾಜಪೂತ್ ಮತ್ತು ತಂಡ ದಿಢೀರ್ ದಾಳಿ ನಡೆಸಿ, ಅಕ್ರಮ ಮರಳು ದಾಸ್ತಾನನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಅಕ್ರಮವಾಗಿ ಮರಳುಗಾರಿಗೆ ನಡೆಯುತ್ತಿದ್ದ ಬಗ್ಗೆ ಬಂಟ್ವಾಳ ಎಎಸ್ಪಿ ಗೆ ಬಂದ ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನ ದಾಳಿ ನಡೆಸಿದ್ದು, ದಾಳಿ ವೇಳೆ ಒಂದು ದೋಣಿ ಮತ್ತು ಒಂದು ಟಿಪ್ಪರ್ ವಾಹನ ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ವೇಣೂರು ಠಾಣೆಗೆ ಹಸ್ತಾಂತರಿಸಲಾಗಿದೆ.

- Advertisement -

Latest News

error: Content is protected !!