Thursday, June 4, 2026
Homeಕರಾವಳಿಬೆಳ್ತಂಗಡಿ: ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ರಾಡಿಯ ಅತ್ರಿಜಾಲು ಸಮೀಪದ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಕೃಷಿಕ ದಂಪತಿ ತಮ್ಮ ಮಗುವಿನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಕೊಕ್ರಾಡಿ ಗ್ರಾಮದ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37.ವ) ಅವರ ಪತ್ನಿ ಆಶಾ(30.ವ) ಹಾಗೂ 5 ವರ್ಷ ಪ್ರಾಯದ ಮಗು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಿಂದ ಈ ಮೂವರ ಸ್ಥಿತಿಯೂ ಚಿಂತಾಜನಕವಾಗಿದೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಆರ್ಥಿಕವಾಗಿ ಸಧೃಢರಾಗಿದ್ದರು. ಯಾವುದೋ ಕೌಟುಂಬಿಕ ಕಲಹದಿಂದ ಈ ಕೃತ್ಯವೆಸಗಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!