Thursday, May 2, 2024
Homeಕರಾವಳಿಕರಾವಳಿಯ ಐವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ಪ್ರಶಸ್ತಿಗಳ ಪ್ರದಾನ

ಕರಾವಳಿಯ ಐವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ಪ್ರಶಸ್ತಿಗಳ ಪ್ರದಾನ

spot_img
- Advertisement -
- Advertisement -

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲ್ಪಡುವ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳ ಪ್ರದಾನ ಬೆಂಗಳೂರಿನಲ್ಲಿ ನಡೆಯಿತು.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ವರ್ಷಗಳ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

2020-21ನೇ ಸಾಲಿನ ಸಂತ ಶಿಶುನಾಳ ಷರೀಫ ಪ್ರಶಸ್ತಿಯನ್ನು ಗಾಯಕ ಪುತ್ತೂರು ನರಸಿಂಹ ನಾಯಕ್ ಅವರಿಗೆ ಪ್ರದಾನ ಮಾಡಲಾಗಿದೆ.

2022-23ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಅರುವ ಕೊರಗಪ್ಪ ಶೆಟ್ಟಿ, 2023-24ನೇ ಸಾಲಿನ ಬಿ.ವಿ. ಕಾರಂತ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸದಾನಂದ ಸುವರ್ಣ ಮತ್ತು 2020-21ನೇ ಸಾಲಿನ ಪ್ರೊ. ಕೆ‌.ಜಿ‌. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿಯನ್ನು ಕಾಸರಗೋಡಿನ ಡಾ. ರಮಾನಂದ ಬನಾರಿ ಅವರಿಗೆ ಪ್ರದಾನ ಮಾಡಲಾಗಿದೆ.

2022-23ನೇ ಸಾಲಿನ ಕನಕ ಶ್ರೀ ಪ್ರಶಸ್ತಿಯನ್ನು ಮಂಗಳೂರಿನ ಡಾ. ಬಿ. ಶಿವರಾಮ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಗಿದೆ.

ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!