Thursday, June 4, 2026
Homeಕರಾವಳಿಮಂಗಳೂರು: ಹಿರಿಯ ಸಾಹಿತಿ, ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನ

ಮಂಗಳೂರು: ಹಿರಿಯ ಸಾಹಿತಿ, ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನ

- Advertisement -
- Advertisement -

ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 86 ವರ್ಷ ವಯಸ್ಸಿನ ಸಾರಾ ಅಬೂಬಕ್ಕರ್ ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾ.ರಾ.ಅಬೂಬಕ್ಕರ್ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ತಮ್ಮ ಬರಹಗಳಲ್ಲಿ ಮುಸ್ಲಿಂನ ಕೆಲವು ಸಂಪ್ರದಾಯಗಳನ್ನು ಕಟುವಾಗಿ ಟೀಕಿಸುತ್ತಿದ್ದರು. ಕಾಸರಗೋಡಿನ ಚಂದ್ರಗಿರಿಯಲ್ಲಿ ಜೂನ್ 30, 1936 ರಂದು ಹುಟ್ಟಿ ಬೆಳೆದ ಸಾರಾ ಅಬೂಬಕ್ಕರ್ ಅವರು ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು. 

- Advertisement -

Latest News

error: Content is protected !!