Monday, May 20, 2024
Homeಕರಾವಳಿಹುಬ್ಬಳ್ಳಿ ಘಟನೆ ಬಗ್ಗೆ ಉನ್ನತಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಆಗ್ರಹ

ಹುಬ್ಬಳ್ಳಿ ಘಟನೆ ಬಗ್ಗೆ ಉನ್ನತಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಆಗ್ರಹ

spot_img
- Advertisement -
- Advertisement -

ಮಂಗಳೂರು : ಹುಬ್ಬಳ್ಳಿ ಘಟನೆ ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಆಂತರಿಕ ಸುರಕ್ಷತೆಯ ಮೇಲೆ ಮುಸ್ಲಿಂ ಮತಾಂಧರ ದಾಳಿ ಹೆಚ್ಚಾಗುತ್ತಿದ್ದು ಮಂಗಳೂರಿನಲ್ಲಿ NRC ಪ್ರತಿಭಟನೆಯ ವಿಷಯದಲ್ಲಿ ಬಂದರು ಪೋಲೀಸರ ಮೇಲೆ ದಾಳಿ ನಡೆಸಿ ಪೊಲೀಸ್ ಠಾಣೆಗೆ ಬೇಕಿ ಹಚ್ಚಲು ಪ್ರಯತ್ನಿಸಿದ್ದರು. ಮುಂದುವರಿದು ಬೆಂಗಳೂರಿನ ಡಿಜೆ ಹಳ್ಳಿ ಕೆಜೆಹಳ್ಳಿ ಪೊಲೀಸ್ ಠಾಣೆಗೆ ದಾಳಿ ನಡೆಸಿ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.

ಪ್ರತಿಭಟನೆಯ ನೆಪದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದಾಳಿ ನಡೆಸಿ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈಗ ಯಾವುದೋ ಕ್ಷುಲ್ಲಕ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ದಾಳಿ ನಡೆಸಿ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ್ದಾರೆ. ಆಂಜನೇಯ ದೇವಸ್ಥಾನದದ ಮೇಲೆ ಕಲ್ಲುತೂರಾಟ ನಡೆಸಿದ್ದಲ್ಲದೇ, ದೇವಸ್ಥಾನವನ್ನು ಧ್ವಂಸಗೊಳಿಸಲು ಯತ್ನಿಸಿದ್ದಾರೆ. ಹಿಂದೂ ಮನೆಗಳಿಗೆ ಕಲ್ಲುತೂರಾಟ ನಡೆಸಿ ಸಾರ್ವಜನಿಕ ಅಸ್ತಿ ಪಾಸ್ತಿ ನಷ್ಟ ಮಾಡಿದ್ದಾರೆ.

ಇದೊಂದು ಇಸ್ಲಾಂ ಜಿಹಾದಿ ಮಾನಸಿಕತೆಯನ್ನು ಬಿಂಬಿಸುತ್ತದೆ. ಇದೊಂದು ಭಯೋತ್ಪಾದಕ ರೀತಿಯ ಕೃತ್ಯವಾಗಿದ್ದು, ಕರ್ನಾಟಕದ ಅಂತರಿಕ ಸುರಕ್ಷತೆ ಕಾಪಾಡುತ್ತಿರುವ ಪೊಲೀಸ್ ಇಲಾಖೆಗೆ ಸವಾಲೆಸಿದಿದ್ದಾರೆ. ತಕ್ಷಣ ಸರಕಾರ ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಅಗ್ರಹಿಸುತ್ತೇನೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!