Friday, May 17, 2024
Homeಕರಾವಳಿಮಂಗಳೂರಿನಲ್ಲಿ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನ ಪತ್ತೆ ಪ್ರಕರಣ:  ಮಸೀದಿ ಪರವಾನಿಗೆ ರದ್ದುಗೊಳಿಸಿ ತನಿಖೆ ನಡೆಸಲು...

ಮಂಗಳೂರಿನಲ್ಲಿ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನ ಪತ್ತೆ ಪ್ರಕರಣ:  ಮಸೀದಿ ಪರವಾನಿಗೆ ರದ್ದುಗೊಳಿಸಿ ತನಿಖೆ ನಡೆಸಲು ಪುರಾತತ್ವ ಇಲಾಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

spot_img
- Advertisement -
- Advertisement -

ಮಂಗಳೂರು: ಇಲ್ಲಿನ  ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ  ಪಂಚಾಯಿತಿಯಲ್ಲಿರುವ ಸರ್ವೇ ನಂ 1/10  ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ  ಕಟ್ಟಡ ನವೀಕರಣ ಸಂಧರ್ಭದಲ್ಲಿ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ. ಮೇಲ್ನೋಟಕ್ಕೆ ನೋಡಿದಾಗ ಪುರಾತನ  ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಡ ಕಟ್ಟಿರುವುದು ಕಂಡು ಬಂದಿದೆ. ಕಟ್ಟಡದ  ಒಳಗೆ ಮತ್ತು ಹೊರಗಡೆ  ನೋಡುವಾಗ ಪ್ರಾಚೀನ ದೇವಸ್ಥಾನದ ಕಟ್ಟಡದ ಶೈಲಿಯಲ್ಲಿ ಕಂಡು ಬರುತ್ತದೆ.

ಆದ್ದರಿಂದ ಗಂಜಿಮಠ ಗ್ರಾಮಪಂಚಾಯತಿ ನೀಡಿದ ಕಟ್ಟಡ ಪರವಾನಿಗೆ ನಂ 11/2021/22 ರ ಪ್ರಕಾರ ನೀಡಿರುವ  ಮಸೀದಿ ನವೀಕರಣದ ಅನುಮತಿಯನ್ನು ರದ್ದುಗೊಳಿಸಿ, ಇದನ್ನು ಪರಿಶೀಲಿಸಿ ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಬೇಕು ಮತ್ತು ಆ ಸ್ಥಳದಲ್ಲಿರುವ ಕಟ್ಟಡವನ್ನು ಯಥಾಸ್ಥಿತಿಯಲ್ಲಿರುವಂತೆ ಕಾಪಾಡಿಕೊಳ್ಳಲು ಕ್ರಮಕೈಗೊಳ್ಳಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ, ತಾಲೂಕ ಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್  ಮುಖಂಡ ಶರಣ್ ಪಂಪುವೆಲ್  ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!