Saturday, April 20, 2024
Homeತಾಜಾ ಸುದ್ದಿಮುಸ್ಲಿಂ ಸಮುದಾಯಕ್ಕೆ ಉಪರಾಷ್ಟ್ರಪತಿ ಪಟ್ಟ? ರೇಸ್‌ನಲ್ಲಿ ನಖ್ವಿ,ಆರಿಫ್ ಮೊಹಮ್ಮದ್ ಖಾನ್, ನಜ್ಮಾ ಹೆಪ್ತುಲ್ಲಾ!

ಮುಸ್ಲಿಂ ಸಮುದಾಯಕ್ಕೆ ಉಪರಾಷ್ಟ್ರಪತಿ ಪಟ್ಟ? ರೇಸ್‌ನಲ್ಲಿ ನಖ್ವಿ,ಆರಿಫ್ ಮೊಹಮ್ಮದ್ ಖಾನ್, ನಜ್ಮಾ ಹೆಪ್ತುಲ್ಲಾ!

spot_img
- Advertisement -
- Advertisement -

ದೆಹಲಿ: ರಾಷ್ಟ್ರದ ಅತ್ಯುನ್ನತ ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಯಿಂದ ಮುಸ್ಲಿಂ ಸಮುದಾಯದ ಮೂವರು ಹಾಗೂ ಸಿಖ್ ಸಮುದಾಯದ ಓರ್ವ ನಾಯಕರ ಹೆಸರು ಕೇಳಿ ಬರುತ್ತಿದೆ. 16ನೇ ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಆಗಸ್ಟ್ 6 ರಂದು ನಡೆಯಲಿರುವ ಚುನಾವಣೆಗೆ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದ್ದು, ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಜುಲೈ 19ಕ್ಕೆ ಬೆಳಗ್ಗೆ 11 ಗಂಟೆಯಿಂದ ಸಂಜೆ 3 ಗಂಟೆಯವರೆ ನಾಮಪತ್ರ ಸಲ್ಲಿಕೆ ಮಾಡಬಹುದು. ನವದೆಹಲಿಯಲ್ಲಿರುವ ಪಾರ್ಲಿಮೆಂಟ್ ಹೌಸ್ ನ ರೂಂನಂ 18ರಲ್ಲಿ ನಾಮಪತ್ರ ಸಲ್ಲಿಸಬಹುದು. ಈ ಚುನಾವಣೆಯ ರಿಟರ್ನಿಂಗ್ ಆಫೀಸರ್ ಆಗಿ ಲೋಕಸಭೆ ಸೆಕ್ರಟರಿ ಜನರಲ್ ಉತ್ಪಲ್ ಕುಮಾರ್ ಸಿಂಗ್  ಅವರಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಮುಸ್ಲಿಂ ಸಮುದಾಯಕ್ಕೆ ಸೇರಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರದ ಮಾಜಿ ಸಚಿವೆ ನಜ್ಮಾ ಹೆಪ್ತುಲ್ಲಾ ಹೆಸರುಗಳು ಕೇಳಿ ಬರುತ್ತಿವೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಆಡಳಿತಾರೂಢ ಮೈತ್ರಿಕೂಟದಿಂದ ನಾಲ್ಕನೇ ಸಂಭಾವ್ಯ ಅಭ್ಯರ್ಥಿಯಾಗಿದ್ದಾರೆ.

ತನ್ನ ಅಭ್ಯರ್ಥಿಯನ್ನು ಉಪ ರಾಷ್ಟ್ರಪತಿಯಾಗಿ ಆಯ್ಕೆ ಮಾಡಲು ಬಿಜೆಪಿ ಸಾಕಷ್ಟು ಚುನಾವಣಾ ಬಲವನ್ನು ಹೊಂದಿದೆ. ಪಕ್ಷವು ತನ್ನ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆ ಮಾದರಿಯಲ್ಲಿ ಮತ್ತೊಮ್ಮೆ ಅಚ್ಚರಿ ಮೂಡಿಸಬಹುದು.

ಹಾಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ. ಮುಂದಿನ ಉಪರಾಷ್ಟ್ರಪತಿ ಆಗಸ್ಟ್ 11 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 22 ಕೊನೆಯ ದಿನಾಂಕವಾಗಿದೆ. ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸಲು ‘ಪಸ್ಮಾಂಡ’ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಮರ್ಥ, ವಿವಾದರಹಿತ ನಾಯಕನನ್ನು ಆಯ್ಕೆ ಮಾಡಲು ತೀವ್ರ ಹುಡುಕಾಟ ನಡೆಯುತ್ತಿದೆ” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಅಗತ್ಯವಿರುವ ಪ್ರೊಫೈಲ್ ಪ್ರಕಾರ ಯಾರೂ ಸಿಗದಿದ್ದರೆ, ಪಕ್ಷವು ಆರಿಫ್ ಮೊಹಮ್ಮದ್ ಖಾನ್, ನಖ್ವಿ, ನಜ್ಮಾ ಹೆಪ್ತುಲ್ಲಾ ಮತ್ತು ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್  ಹೆಸರುಗಳಲ್ಲಿ ಯಾವುದಾದರೂ ಒಂದು ಹೆಸರನ್ನು ಆಯ್ಕೆ ಮಾಡಬಹುದು ಎಂದು ತಿಳಿಸಿದ್ದಾರೆ

- Advertisement -
spot_img

Latest News

error: Content is protected !!