Monday, June 29, 2026
Homeಕರಾವಳಿಮಂಗಳೂರುಧರ್ಮಸ್ಥಳಕ್ಕೆ ನಾಳೆ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಭೇಟಿ; ಮೆಗಾ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ

ಧರ್ಮಸ್ಥಳಕ್ಕೆ ನಾಳೆ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಭೇಟಿ; ಮೆಗಾ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ

- Advertisement -
- Advertisement -

ಧರ್ಮಸ್ಥಳ: ನಾಳೆ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಕುಟುಂಬ ಸಮೇತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.

ನಾಳೆ ಮಧ್ಯಾಹ್ನ 1.05 ಕ್ಕೆ ವಾಯುಪಡೆಯ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿ, ವಿಶೇಷ ಹೆಲಿಕಾಫ್ಟರ್ ಮೂಲಕ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು 2024-25ನೇ ಸಾಲಿನ ಜ್ಞಾನ ದೀಪ ಕಾರ್ಯಕ್ರಮವನ್ನು ಜಗದೀಪ್ ಧನಕರ್ ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮ ಮುಗಿಸಿ ಧರ್ಮಸ್ಥಳದಿಂದ ಹೆಲಿಕಾಫ್ಟರ್ ಮೂಲಕವೇ ಮಂಗಳೂರಿಗೆ ವಾಪಸಾಗಲಿರುವ ಉಪರಾಷ್ಟ್ರಪತಿ ಮಧ್ಯಾಹ್ನ 3.50ಕ್ಕೆ ಮಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

- Advertisement -

Latest News

error: Content is protected !!