- Advertisement -
![]()
- Advertisement -
ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಬೆಂಬಲಿತ ಪೂರ್ತಿ 6 ಸ್ಥಾನಗಳನ್ನು ಗೆದ್ದುಕೊಂಡು ಸತತ 7ನೇ ವರ್ಷ ವಿಜಯಪತಾಕೆ ಹಾರಿಸಿದೆ.
ಅಧ್ಯಕ್ಷರಾಗಿ ದ್ವಿತೀಯ ವರ್ಷದ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿ ಸಂಪತ್ ಬಜಿಲಾಡಿ ಆಯ್ಕೆಯಾದರು. ಇವರು ಈ ಮೊದಲು 2019 ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು.
ಕಾರ್ಯದರ್ಶಿಯಾಗಿ ಕಾರ್ತಿಕ್ ರಾವ್, ಉಪಾಧ್ಯಕ್ಷರಾಗಿ ವೇದಾಂತಿ, ಜೊತೆ ಕಾರ್ಯದರ್ಶಿಯಾಗಿ ಸ್ಕಂದ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸೃಷ್ಟಿ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿಯಾಗಿ ಕಾರ್ತಿಕ್ ಅಯ್ಕೆಯಾದರು.
- Advertisement -


