- Advertisement -
- Advertisement -
ಸುಬ್ರಹ್ಮಣ್ಯದ ಕಾಶಿಕಟ್ಟೆ ಮಾರ್ಗದಲ್ಲಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಯುವಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ವೀಡಿಯೋ ಕಳೆದೆರಡು ದಿನಗಳ ಹಿಂದೆ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಎಂಬಾತನನ್ನು ತುಮಕೂರಿನಲ್ಲಿ ಸುಬ್ರಹ್ಮಣ್ಯ ಪೊಲೀಸರು ಬಂಧಿಸಿ, ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕೊಠಡಿ ವಿಚಾರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದ್ದು, ಹಲ್ಲೆಯ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಆರೋಪಿಗೆ ಜಾಮೀನು ಲಭಿಸಿದೆ.
- Advertisement -