Wednesday, June 3, 2026
Homeಕರಾವಳಿವಿಧಾನ ಪರಿಷತ್‌ ಉಪಚುನಾವಣೆ: ಒಟ್ಟು ಐವರಿಂದ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್‌ ಉಪಚುನಾವಣೆ: ಒಟ್ಟು ಐವರಿಂದ ನಾಮಪತ್ರ ಸಲ್ಲಿಕೆ

- Advertisement -
- Advertisement -

ಮಂಗಳೂರು: ವಿಧಾನ ಪರಿಷತ್‌ಗೆ ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನ ಗುರುವಾರವಾಗಿದ್ದು, ಗುರುವಾರದಂದು ಬಿಜೆಪಿ, ಕಾಂಗ್ರೆಸ್‌ ಹಾಗೂ ಎಸ್‌ಡಿಪಿಐ ಅಭ್ಯರ್ಥಿಗಳ ಸಹಿತ ನಾಲ್ವರು ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಮುಲ್ಲೈಮುಗಿಲನ್‌ ಅವರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್‌ ಕುಮಾರ್‌ ಪುತ್ತೂರು, ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಅನ್ವರ್‌ ಸಾದತ್‌, ಪಕ್ಷೇತರ ಅಭ್ಯರ್ಥಿಯಾಗಿ ಮೊಹಮ್ಮದ್‌ ರಿಯಾಝ್ ಅವರು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ನಾಮಪತ್ರ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ಈಗಾಗಲೇ ದಿನಕರ ಉಳ್ಳಾಲ ನಾಮಪತ್ರ ಸಲ್ಲಿಸಿದ್ದು, ಒಟ್ಟು ಐವರು ನಾಮಪತ್ರ ಸಲ್ಲಿಸಿದಂತಾಗಿದೆ.
ಕಿಶೋರ್‌ ಕುಮಾರ್‌ ಪುತ್ತೂರು ಹಾಗೂ ರಾಜು ಪೂಜಾರಿ ತಲಾ 2 ಸೆಟ್‌ ನಾಮಪತ್ರ ಸಲ್ಲಿಸಿದರು. ರಾಜು ಪೂಜಾರಿ ಜತೆಗೆ ರಮಾನಾಥ ರೈ, ಜಯಪ್ರಕಾಶ್‌ ಹೆಗ್ಡೆ, ಮಂಜುನಾಥ ಭಂಡಾರಿ, ಐವನ್‌ ಡಿ’ಸೋಜಾ ಅವರಿದ್ದರು ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!