- Advertisement -


- Advertisement -
ಉಡುಪಿ: ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಉಮಾಶ್ರೀ ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದರ್ಶನದ ಬಳಿಕ ಶಿರೂರು ಮಠದ ವತಿಯಿಂದ ಉಮಾಶ್ರೀ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಸೇರಿದಂತೆ ಮಠದ ಇತರ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಾಂಪ್ರದಾಯಿಕ ರೀತಿಯಲ್ಲಿ ಉಪಸಭಾಪತಿ ಅವರನ್ನು ಬರಮಾಡಿಕೊಂಡು ಗೌರವ ಸಲ್ಲಿಸಲಾಯಿತು.
- Advertisement -


