Wednesday, May 15, 2024
Homeತಾಜಾ ಸುದ್ದಿಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ ಸೇರಿದಂತೆ ಐವರ ಹೆಸರು ವಿಧಾನ ಪರಿಷತ್ ಗೆ...

ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ ಸೇರಿದಂತೆ ಐವರ ಹೆಸರು ವಿಧಾನ ಪರಿಷತ್ ಗೆ ನಾಮನಿರ್ದೇಶನ

spot_img
- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ನೆರವಾಗಿದ್ದ ಹೆಚ್. ವಿಶ್ವನಾಥ್ ಮತ್ತು ಸಿ.ಪಿ. ಯೋಗೇಶ್ವರ್ ಸೇರಿದಂತೆ ಐವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಮಾಜಿ ಸಂಸದ ಹೆಚ್. ವಿಶ್ವನಾಥ್, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಮ್ ಸಿದ್ದಿ ಮತ್ತು ಶಿಕ್ಷಣ ಕ್ಷೇತ್ರದಿಂದ ತಳವಾರ್ ಸಾಬಣ್ಣ ಅವರ ಹೆಸರಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಇವರಲ್ಲಿ ಭಾರತಿ ಶೆಟ್ಟಿ ಎರಡನೇ ಬಾರಿ ವಿಧಾನ ಪರಿಷತ್ ಗೆ ಸದಸ್ಯರಾಗಿ ಆಯ್ಕೆಯಾಗುತ್ತಿದ್ದಾರೆ. ಇನ್ನು ಮುಖ್ಯಮುಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಭಾರತಿಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ.

ಸಿ.ಪಿ. ಯೋಗೇಶ್ವರ್ ಮತ್ತು ಭಾರತಿ ಶೆಟ್ಟಿ ಹಾಗೂ ಹೆಚ್. ವಿಶ್ವನಾಥ್ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡುವಲ್ಲಿ ಯಡಿಯೂರಪ್ಪ ಪ್ರಮುಖ ಪಾತ್ರವಹಿಸಿದ್ದಾರೆ.  ಈ ಮೂಲಕ ರಾಜ್ಯ ಬಿಜೆಪಿಯಲ್ಲಿ ಪ್ರಶ್ನಾತೀತ ನಾಯಕರಾಗಿದ್ದಾರೆ. ವರಿಷ್ಠರು ಆಯ್ಕೆ ಬಗ್ಗೆ ಆಕ್ಷೇಪಿಸಿದ್ದರೂ ಪಟ್ಟು ಹಿಡಿದು ಸರ್ಕಾರ ರಚಿಸುವಲ್ಲಿ ನೆರವಾದವರಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗಿದೆ.

ಯಾರು ಈ ಶಾಂತಾರಮ ಸಿದ್ದಿ ?
ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಮ ಸಿದ್ದಿರವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ. ಶಾಂತಾರಾಮ ಸಿದ್ಧಿ ಸಮುದಾಯದ ಮೊದಲ ಪದವಿಧರರು. 7ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ . ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು . ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಮ ಸಿದ್ಧಿ ಈ ಹಿಂದೆ ಪಶ್ಛಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು . ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದವರು.

ತಳವಾರ ಸಾಬಣ್ಣ ಪರಿಚಯ:
ಪ್ರೊ. ತಳವಾರ ಸಾಬಣ್ಣ ಅವರು ಕೋಳಿ ಸಮಾಜಕ್ಕೆ ಸೇರಿದವರಾಗಿ, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಶ್ರಮಿಸಿದ್ದಾರೆ.

- Advertisement -
spot_img

Latest News

error: Content is protected !!