Thursday, June 4, 2026
Homeತಾಜಾ ಸುದ್ದಿರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ : ವಿಧಾನಸೌಧದಲ್ಲಿ ನಿರ್ಮಾಣವಾಗಲಿದೆ ಹೊಸ ದಾಖಲೆ!

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ : ವಿಧಾನಸೌಧದಲ್ಲಿ ನಿರ್ಮಾಣವಾಗಲಿದೆ ಹೊಸ ದಾಖಲೆ!

- Advertisement -
- Advertisement -

ಬೆಂಗಳೂರು: ವಂದಿತಾ ಶರ್ಮಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ಹೊಸ ದಾಖಲೆ ನಿರ್ಮಾಣವಾಗಲಿದೆ.

ಈ ಮೂಲಕ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

1986ನೇ ಸಾಲಿನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ವಂದಿತಾ ಶರ್ಮ ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ನಿರ್ವಹಿಸಿದ್ದರು.

ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕರ ಹುದ್ದೆಯನ್ನು ನೀಲಮಣಿ ಎನ್. ರಾಜು ನಿರ್ವಹಿಸಿದ್ದರು. ಆಗ ಸಿಎಸ್ ಮತ್ತು ಡಿಜಿಪಿ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಿದ್ದು ಗಮನಾರ್ಹ ಅಂಶವಾಗಿತ್ತು.

- Advertisement -

Latest News

error: Content is protected !!