Sunday, June 7, 2026
Homeಕರಾವಳಿಟೊಮ್ಯಾಟೊ ಫ್ಲೂ ತಡೆಗಟ್ಟಲು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ

ಟೊಮ್ಯಾಟೊ ಫ್ಲೂ ತಡೆಗಟ್ಟಲು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ

- Advertisement -
- Advertisement -

ಬೆಂಗಳೂರು: ಮಕ್ಕಳಲ್ಲಿ ಕಂಡುಬರುವ ಟೊಮ್ಯಾಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಅಪರೂಪದ ವೈರಸ್ ರೋಗವಾಗಿರುವ ಟೊಮ್ಯಾಟೊ ಜ್ವರದ ಪ್ರಕರಣಗಳು ಕೇರಳ ರಾಜ್ಯದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್ ನಲ್ಲಿ ಕಂಡುಬಂದಿದೆ.

ಕೇರಳದಲ್ಲಿ ಈ ರೋಗದ ಪ್ರಕರಣಗಳು ಪತ್ತೆಯಾಗಿರುವುದರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇರಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದ ಯಾವುದೇ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡುಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.

ಈ ಬಗ್ಗೆ ಹೆಚ್ಚಿನ ನಿಗಾ ಇರಿಸಲು ಈ ಜಿಲ್ಲೆಗಳೂ ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಿಂದ ಲಿಖಿತ ನಿರ್ದೇಶನ ನೀಡಲಾಗಿದೆ‌.

- Advertisement -

Latest News

error: Content is protected !!