ನವದೆಹಲಿ : ಭಾರತದ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂ. ಮೋಸ ಮಾಡಿ ದೇಶ ಬಿಟ್ಟು ಪರಾರಿಯಾಗಿದ್ದ ಆರ್ಥಿಕ ಅಪರಾಧಿ, ಮದ್ಯದ ದೊರೆ ವಿಜಯ್ ಮಲ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಗಡಿಪಾರು ಅರ್ಜಿಯನ್ನು ಮರು ಪರಿಶೀಲಿಸುವಂತೆ ಲಂಡನ್ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಉದ್ಯಮಿ ಮಲ್ಯಗೆ ಮತ್ತೆ ಹಿನ್ನಡೆ ಉಂಟಾಗಿದೆ.
ಕಿಂಗ್‌ಫಿಷರ್ ಏರ್‌ಲೈನ್ಸ್ ಗಾಗಿ ಭಾರತದ ವಿವಿಧ ಬ್ಯಾಂಕುಗಳಿಂದ ವಿಜಯ ಮಲ್ಯ ಸುಮಾರು 9,000 ಕೋಟಿ ರೂ. ಸಾಲ ಪಡೆದಿದ್ದರು. ಅಲ್ಲದೆ, ಆ ಹಣವನ್ನು ತೀರಿಸಲಾಗದೆ ಲಂಡನ್‌ನಲ್ಲಿ ತಲೆ ಮರೆಸಿಕೊಂಡಿದ್ದರು. ಇಂತಹ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾರಿಸುವಂತೆ ಲಂಡನ್ ಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ, ಲಂಡನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಕುರಿತಂತ ವಿಚಾರಣೆ ನಡೆಸಿದ ಲಂಡನ್ ಹೈಕೋರ್ಟ್ ಇಂದು, ಮಲ್ಯ ಸಲ್ಲಿಸಿರುವ ಗಡಿಪಾರು ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಭಾರತಕ್ಕೆ ವಾಪಾಸ್ ಆಗದೇ ವಿಧಿಯಿಲ್ಲ ಎನ್ನುವಂತಾಗಿದೆ. ಈ ಮೂಲಕ ಉದ್ಯಮಿ ಮಲ್ಯಗೆ ಮತ್ತೆ ಹಿನ್ನಲೆಯಾಗಿದೆ.