- Advertisement -


- Advertisement -
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ಜೋಸೆಫ್ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವಿನ ವಿಚ್ಛೇದನ ಪ್ರಕರಣಕ್ಕೆ ತೆರೆಬಿದ್ದಿದೆ. ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಸಂಗೀತಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದಾರೆ. ಇದರೊಂದಿಗೆ ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿದೆ.
ಸಂಗೀತಾ ಅವರು ಈ ವರ್ಷದ ಫೆಬ್ರವರಿಯಲ್ಲಿ ವಿಚ್ಛೇದನ, ವಾಸದ ಹಕ್ಕು ಹಾಗೂ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಹಿಂಪಡೆಯುವುದರೊಂದಿಗೆ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.
- Advertisement -


