- Advertisement -
- Advertisement -
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಬರ್ತಡೇ ಪಾರ್ಟಿಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ರಾಕೇಶ್ ಅವರ ಜೊತೆ ಕಾಣಿಸಿಕೊಂಡಿದ್ದಾರೆ.
ನಿನ್ನೆ ವಿಜಯಲಕ್ಷ್ಮೀ ದರ್ಶನ್ ಅವರ ಮತ್ತೊಬ್ಬ ಸ್ನೇಹಿತೆ ಶೃತಿ ಅವರ ಬರ್ತಡೇ ಪಾರ್ಟಿ ಬೆಂಗಳೂರಿನಲ್ಲಿ ನಡೆದಿತ್ತು. ಈ ಪಾರ್ಟಿಯಲ್ಲಿ ಸ್ಮಿತಾ ರಾಕೇಶ್ ಅವರ ಜೊತೆ ಡಿ ಬಾಸ್ ಪತ್ನಿ ಕಾಣಿಸಿಕೊಂಡಿದ್ದಾರೆ.
ಸ್ಮಿತಾ ರಾಕೇಶ್ ಹಾಗೂ ವಿಜಯಲಕ್ಷ್ಮೀ ದರ್ಶನ್ ಅವರು ಬಹು ವರ್ಷಗಳ ಸ್ನೇಹಿತರಾಗಿದ್ದು, ನಿನ್ನೆ ಮೂವರು ಸ್ನೇಹಿತೆಯರು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇದರ ಮಧ್ಯೆ ವಿಜಯಲಕ್ಷ್ಮೀ ಅವರು ಇನ್ಸ್ಟಾಗ್ರಾಂನಲ್ಲಿ ಸ್ಟೋರಿಯೊಂದನ್ನು ಹಾಕಿದ್ದಾರೆ. ಅದರಲ್ಲಿ Prayer Powerful ಎಂದು ಬರೆದುಕೊಂಡಿದ್ದಾರೆ. ವಿಜಯಲಕ್ಷ್ಮೀ ಅವರ ಈ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ.
- Advertisement -