Friday, June 27, 2025
HomeUncategorizedಅಭಿಮಾನಿಗಳಿಗೆ ದರ್ಶನ್ ಪರವಾಗಿ ಭಾವುಕ ಪತ್ರ ಬರೆದ ಪತ್ನಿ ವಿಜಯಲಕ್ಷ್ಮೀ

ಅಭಿಮಾನಿಗಳಿಗೆ ದರ್ಶನ್ ಪರವಾಗಿ ಭಾವುಕ ಪತ್ರ ಬರೆದ ಪತ್ನಿ ವಿಜಯಲಕ್ಷ್ಮೀ

spot_img
- Advertisement -
- Advertisement -

ಬೆಂಗಳೂರು; ದರ್ಶನ್ ಅರೆಸ್ಟ್ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮೊನ್ನೆ ಜೂನ್ 19 ರಂದು ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೋರ್ಟ್ ನಿಂದ ಸ್ಟೇ ತಂದಿರುವ ಬಗ್ಗೆ ಪೋಸ್ಟ್ ಹಾಕಿದ್ದರು. ಆದರೆ ಅಭಿಮಾನಿಗಳಿಗಾಗಿ ಯಾವುದೇ ಪೋಸ್ಟ್ ಹಾಕಿರಲಿಲ್ಲ. ಆದರೆ ಇದೀಗ ಮೊನ್ನೆ ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿಯಾದ ಬಳಿಕ ಅಭಿಮಾನಿಗಳಿಗಾಗಿ ವಿಜಯಲಕ್ಷ್ಮೀ ದರ್ಶನ್ ಪರವಾಗಿ ಪತ್ರವೊಂದನ್ನು ಬರೆದಿದ್ದಾರೆ.

ಆ ಪತ್ರದ ಸಾಲುಗಳು ಇಂತಿವೆ…ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೇ ಎಂದು ವಿಜಿ ಬರೆದಿದ್ದಾರೆ.

- Advertisement -
spot_img

Latest News

error: Content is protected !!