ವಿಜಯಪುರ: ವಿವಾಹಿತೆಯೊಬ್ಬಳು ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನಲ್ಲಿ ಅಲಿಯಾಬಾದ್ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಅಮರನಾಥ್ ಸೊಲ್ಲಾಪುರ (25), ಸುನಿತಾ ತಳವಾರ (35) ಹತ್ಯೆಯಾದವರು.

ಮಹಿಳೆಯ ಪತಿ ಮೃತಪಟ್ಟಿದ್ದು, ನಂತರದಲ್ಲಿ ಆಕೆ ಯುವಕನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಜಮೀನಿನಲ್ಲಿದ್ದ ಮನೆಯಲ್ಲಿ ಇಬ್ಬರು ರಾತ್ರಿ ಸಂಬಂಧ ಬೆಳೆಸಿದ್ದಾಗಲೇ ಮಹಿಳೆಯ ತಂದೆ ಹಾಗೂ ಮಗ ಅಲ್ಲಿಗೆ ಬಂದಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿದು ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸುನೀತಾಳ ತಂದೆ ರಾಮಗೊಂಡ ಹಾಗೂ ಆಕೆಯ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ಇನ್ಸಪೆಕ್ಟರ್ ಮಹಾಂತೇಶ ದಾಮಣ್ಣವರ ಹಾಗೂ ಇತರ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿ, ತನಿಖೆ ಮುಂದುವರೆಸಿದ್ದಾರೆ.