Saturday, June 6, 2026
Homeತಾಜಾ ಸುದ್ದಿಪಿಎಸ್‌ಐ ಅಕ್ರಮದಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ್‌ ಪಾತ್ರವೂ ಇದೆ: ಸಿದ್ದರಾಮಯ್ಯ ಗಂಭೀರ ಆರೋಪ

ಪಿಎಸ್‌ಐ ಅಕ್ರಮದಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ್‌ ಪಾತ್ರವೂ ಇದೆ: ಸಿದ್ದರಾಮಯ್ಯ ಗಂಭೀರ ಆರೋಪ

- Advertisement -
- Advertisement -

ಬೆಂಗಳೂರು: ಪಿಎಸ್ ಐ ನೇಮಕ ಹಗರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹಾಗೂ ಸಚಿವ ಅಶ್ವತ್ಥನಾರಾಯಣ ಅವರ ಹೆಸರೂ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ವಿಜಯೇಂದ್ರ ಅವರ ಪಾತ್ರವೂ ಇದೆ ಎಂಬ ಆರೋಪ ಕೇಳಿ ಬಂದಿದೆ. ನಾನು ವಿಧಾನಸಭೆಯಲ್ಲೇ ಅವರ ಹೆಸರು ಹೇಳಿದ್ದೆ. ಸಿಎಂ ಬಸವರಾಜ್ ಬೊಮ್ಮಾಯಿ ಇವರೆಲ್ಲರಿಗೂ ರಕ್ಷಣೆ ನೀಡುತ್ತಿರುವುದರಿಂದ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಿಐಡಿಯಿಂದ ನ್ಯಾಯ ಸಿಗುವುದಿಲ್ಲವೆಂದು ನಾನು ಹೇಳಿದ್ದೆ. ಇದರಲ್ಲಿ ದೊಡ್ಡ ದೊಡ್ಡವರು, ಮಂತ್ರಿಗಳಿದ್ದಾರೆ. ಹೀಗಾಗಿ ನ್ಯಾಯಾಂಗ ತನಿಖೆಗೆ ಸದನದಲ್ಲಿ ಒತ್ತಾಯ ಮಾಡಿದ್ದ ಹೈಕೋರ್ಟ್‌ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ಮಾಡಿ ಎಂದು ಸಿಎಂಗೆ ಪತ್ರ ಬರೆದಿದ್ದೆ. ಆಗ ಮಾತ್ರ ಸತ್ಯ ಹೊರಬರಲು ಸಾಧ್ಯವಾಗುತ್ತದೆ. ಆದರೆ ಸರ್ಕಾರ ನಾವು ಹೇಳಿದ ಹಾಗೇ ಮಾಡಿಲ್ಲ ಎಂದರು.

- Advertisement -

Latest News

error: Content is protected !!