Sunday, June 7, 2026
Homeಕರಾವಳಿ2024ಕ್ಕೆ ದ.ಕ. ಲೋಕಸಭಾ ಕ್ಷೇತ್ರಕ್ಕೆ ನಳೀನ್ ಕುಮಾರ್ ಕಟೀಲ್ ಬಿಜೆಪಿ ಅಭ್ಯರ್ಥಿ?:ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ನಳೀನ್...

2024ಕ್ಕೆ ದ.ಕ. ಲೋಕಸಭಾ ಕ್ಷೇತ್ರಕ್ಕೆ ನಳೀನ್ ಕುಮಾರ್ ಕಟೀಲ್ ಬಿಜೆಪಿ ಅಭ್ಯರ್ಥಿ?:ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ನಳೀನ್ ಪರ ವಿಜಯೇಂದ್ರ ಬ್ಯಾಟಿಂಗ್!

- Advertisement -
- Advertisement -

ಮಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ನಾಲ್ಕನೇ ಬಾರಿಗೆ ಅಭ್ಯರ್ಥಿಯಾಗುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಮಂಗಳೂರಿನಲ್ಲಿ ಇಂದು ಸಿ.ವಿ. ನಾಯಕ್ ಹಾಲ್ ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮತ್ತೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿ ಕೊಡಿ ಎಂದು ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದ್ದು, ಮತ್ತೊಮ್ಮೆ ನಮ್ಮ‌ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಭಾಷಣದ ವೇಳೆ ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಲು ಬಿಜೆಪಿಯಲ್ಲಿ ಹಲವರಿಂದ ಬೇಡಿಕೆ ಇರುವ ಮಧ್ಯೆಯೇ ನಳೀನ್ ಕುಮಾರ್ ಕಟೀಲ್ ಪರ ವಿಜಯೇಂದ್ರ ಕಾರ್ಯಕರ್ತರ ಸಭೆಯಲ್ಲಿ ಬ್ಯಾಟಿಂಗ್ ಮಾಡಿರುವುದು ಗಮನ ಸೆಳೆದಿದೆ.

- Advertisement -

Latest News

error: Content is protected !!